
ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತೈಲ ಬೆಲೆ ಹೆಚ್ಚಳ ಬೆನ್ನಲ್ಲೇ 2014ರಿಂದ ಬಿಎಂಟಿಸಿ ಯ ನಾಲ್ಕು ವರ್ಷದಿಂದ ಕೆಎಸ್‌ಆರ್‌ಟಿಸಿ ಪ್ರಯಾಣ ದರ ಹೆಚ್ಚಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳುವ ಮೂಲಕ ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಿಸುವ ಸುಳಿವನ್ನು ನೀಡಿದ್ದಾರೆ.
ಇದರ ಜೊತೆಗೆ ಹೆಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯ ಕುರಿತು ಮಾಹಿತಿ ನೀಡಿದ ಅವರು ಸೆಪ್ಟೆಂಬರ್ 15 ವರಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್‌ಲೈನ್ ನೀಡಲಾಗಿದ್ದು ಸೆಪ್ಟೆಂಬರ್ 15 ಬಳಿಕ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ. ಶೀಘ್ರದಲ್ಲೇ ಹೆಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು