
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪೋಕ್ಸೊ ಕೇಸ್ ತನಿಖೆ ಎದುರಿಸಲು ಇಂದು ಸಿಐಡಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದ್ದು ಪ್ರಕರಣದ ಹೆಚ್ಚಿನ ತನಿಖೆಗೆ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಮಾಡಿತ್ತು. ಇದಾದ ಬಳಿಕ ಸಿಐಡಿ ಬಿಎಸ್ವೈ ಅವರನ್ನು ಕರೆದು ವಾಯ್ಸ್ ಸ್ಯಾಂಪಲ್ ಪಡೆದು ತನಿಖಾಧಿಕಾರಿಗಳು ಅವರನ್ನು ಕಳುಹಿಸಿಕೊಟ್ಟಿದ್ದಾರೆ. ಬಿಎಸ್ವೈ ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿದ್ದರಿಂದ ಸಿಐಡಿ ವಾರೆಂಟ್ ಜಾರಿ ಮಾಡಿ ಬಂಧನಕ್ಕೆ ಮುಂದಾಗಿತ್ತು. ಈ ವೇಳೆ ಕೋರ್ಟ್ ಬಂಧಿಸದಂತೆ ತಡೆ ನೀಡಿ ಇಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದರಿಂದ ಸಿಐಡಿ ಮುಂದೆ ಬಿಎಸ್ವೈ ಇಂದು ತನಿಖೆಗೆ ಹಾಜರಾಗಲಿದ್ದಾರೆ.