
ಮುಂಬೈ: ಪೋರ್ಶೆ ಕಾರು ಡಿಕ್ಕಿ ಹೊಡೆದು ಇಬ್ಬರು ಟೆಕ್ಕಿಗಳು ಮೃತಪಟ್ಟ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ಅದೇನೆಂದರೆ ಕಾರು ಚಲಾಯಿಸಿದ್ದ ಆರೋಪಿ ಅಪ್ರಾಪ್ತನ ತಾಯಿ ತನ್ನ ಮಗ ಕುಡಿದಿರಲಿಲ್ಲ ಎಂದು ಸಾಬೀತುಪಡಿಸಲು ರಕ್ತದ ಮಾದರಿಯನ್ನು ಬದಲಾಯಿಸಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದ್ದು ಇದೀಗ ಪುಣೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಅಪ್ರಾಪ್ತನ ರಕ್ತದ ಮಾದರಿ ಬದಲಿಗೆ ಆತನ ತಾಯಿಯ ರಕ್ತದ ಮಾದರಿಯನ್ನು ಪರೀಕ್ಷೆ ವೇಳೆ ಬದಲಾಯಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಘಟನೆಯ ಹಿನ್ನೆಲೆ:
ಮೇ 19 ರಂದು ಪುಣೆಯ ಕಲ್ಯಾಣಿ ನಗರದಲ್ಲಿ ಅಪ್ರಾಪ್ತ ಪಾನಮತ್ತರಾಗಿ ಪೋರ್ಶೆ ಕಾರು ಚಲಾಯಿಸಿದ ಕಾರಣ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ್ದರು. ಅಪ್ರಾಪ್ತನ ಕುಟುಂಬದ ಚಾಲಕನನ್ನು ಅಪಹರಿಸಿ ತಾನೇ ತಪ್ಪು ಒಪ್ಪಿಕೊಳ್ಳುವಂತೆ ಆಮಿಷ ಒಡ್ಡಲಾಗಿತ್ತು. ಈ ಆರೋಪದಲ್ಲಿ ಈಗಾಗಲೇ ಬಾಲಕನ ತಂದೆ ಮತ್ತು ತಾತನನ್ನು ಪೊಲೀಸರು ಬಂಧಿಸಿದ್ದಾರೆ.