24.6 C
Udupi
Saturday, March 15, 2025
spot_img
spot_img
HomeBlogಪ್ರಜ್ವಲ್ ರೇವಣ್ಣ ಜರ್ಮನಿಗೆ ಪ್ರಯಾಣಿಸಲು ರಾಜ್ಯ ಸರ್ಕಾರವೇ ಕಾರಣ - ಪ್ರಧಾನಿ ಮೋದಿ

ಪ್ರಜ್ವಲ್ ರೇವಣ್ಣ ಜರ್ಮನಿಗೆ ಪ್ರಯಾಣಿಸಲು ರಾಜ್ಯ ಸರ್ಕಾರವೇ ಕಾರಣ – ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದು ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯದಿಂದಲೇ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ. ಈ ಘಟನೆಗೆ ರಾಜ್ಯ ಸರ್ಕಾರವೇ ನೇರವಾದ ಹೊಣೆಯಾಗಿದ್ದು ಪ್ರಜ್ವಲ್ ಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು ಸ್ಪಷ್ಟ ದೃಷ್ಟಿಕೋನವನ್ನು ಹೊಂದಿದ್ದೇವೆ. ಈ ರೀತಿಯ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಪ್ರಜ್ವಲ್ ದೇಶದಿಂದ ಹೊರಹೋಗಲು ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಇದು ಕಾನೂನು ಸುವವ್ಯವಸ್ಥೆಗೆ ಸಂಬಂಧಿಸಿದ ವಿಷಯವಾದ ಕಾರಣ ಕ್ರಮ ವಹಿಸುವ ಜವಾಬ್ಧಾರಿಯು ಸರ್ಕಾರದ ಮೇಲಿದೆ ಎಂದರು.ರಾಜ್ಯ ಸರ್ಕಾರದ ಬಳಿ ಮಾಹಿತಿ ಇದ್ದಿದ್ದರೆ ವಿಮಾನ ನಿಲ್ದಾಣಗಳಲ್ಲಿ ನಿಗಾ ಇಡಬೇಕಿತ್ತು. ರಾಜ್ಯ ಸರ್ಕಾರ ಏನನ್ನೂ ಮಾಡಲಿಲ್ಲ. ಕೇಂದ್ರ ಸರ್ಕಾರಕ್ಕೂ ಯಾವುದೇ ಮಾಹಿತಿ ನೀಡಲಿಲ್ಲ.

ಇದರ ಅರ್ಥ ಸ್ಪಷ್ಟ ಇದೆಲ್ಲ ರಾಜಕೀಯ ಆಟ. ಇದು ಅವರು ಹೊಂದಾಣಿಕೆ ಮಾಡಿಕೊಂಡಿದ್ದ ಅವಧಿಗೆ ಸೇರಿದ್ದ ವಿಡಿಯೋಗಳು ಎನ್ನುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿತ್ತು ಎಂದು ಕಟುಮಾತಿನಲ್ಲಿ ಕರ್ನಾಟಕ ಸರ್ಕಾರವನ್ನು ತಿವಿದಿದ್ದಾರೆ. ನಮ್ಮ ದೇಶದಲ್ಲಿ ಇಂತಹ ಆಟಗಳನ್ನ ಕೊನೆಗೊಳಿಸಬೇಕು. ಮೋದಿಗೆ ಸಂಬಂಧಿಸಿದಂತೆ, ಬಿಜೆಪಿಗೆ ಸಂಬಂಧಿಸಿದಂತೆ, ಸಂವಿಧಾನಕ್ಕೆ ಸಂಬಂಧಿಸಿದಂತೆ ನಮ ದೃಷ್ಟಿಕೋನ ಬಹಳ ಸ್ಪಷ್ಟವಾಗಿದೆ. ಇಂತಹ ವ್ಯಕ್ತಿಗಳ ವಿರುದ್ಧ ತುಸು ಸಹನೆ ಕೂಡ ತೋರದೆ ಕಾನೂನಡಿಯ ಎಲ್ಲಾ ಆಯ್ಕೆಗಳನ್ನು ಬಳಕೆ ಮಾಡಿ ಕಠಿಣ ಶಿಕ್ಷೆ ನೀಡಬೇಕು. ಪ್ರಜ್ವಲ್‌ ಅವರನ್ನು ವಾಪಸ್‌ ಕರೆತಂದು ಕಠಿಣ ಕ್ರಮ ಆಗಬೇಕು ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page