
ಬೆಂಗಳೂರು: ಕಳೆದ 20 ದಿನದಿಂದ ಕಣ್ಣಾಮುಚ್ಚಾಲೆ ಆಟ ಆಡುತ್ತಿರುವ ಪ್ರಜ್ವಲ್ ರೇವಣ್ಣ ತಮ್ಮ ಆಟವನ್ನು ಮುಂದುವರಿಸಿದ್ದು, ಬೆಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ತನಿಖಾ ತಂಡದ ಪೊಲೀಸರು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ.
ಜರ್ಮನಿಯ ಮ್ಯೂನಿಕ್‌ನಿಂದ ರಿಟರ್ನ್ ಟಿಕೆಟ್ ಬುಕ್ಕಿಂಗ್ ಮಾಡಿದ್ದ ಪ್ರಜ್ವಲ್ ಮಧ್ಯರಾತ್ರಿ ಬರುವ ನಿರೀಕ್ಷೆಗಳು ಇತ್ತು. ಎಸ್‌ಐಟಿ ಪೊಲೀಸರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಡುಬಿಟ್ಟಿದ್ದರು. ಆದರೆ ಆ ಎಲ್ಲಾ ನಿರೀಕ್ಷೆಗಳು ಹುಸಿಯಾಗಿದೆ.