
ತುಮಕೂರು: ಕಾಲೇಜು ವಿದ್ಯಾರ್ಥಿನಿಯೊಬ್ಬಳು 45 ವರ್ಷ ವಯಸ್ಸಿನ ಪುರುಷನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ವರದಿಯಾಗಿದೆ.
ಅನನ್ಯ (19) ಮತ್ತು ರಂಗಶಾಮಣ್ಣ (45) ಪರಸ್ಪರ ಪ್ರೀತಿಸುತ್ತಿದ್ದು ಕುಟುಂಬದವರ ವಿರೋಧ ವ್ಯಕ್ತವಾದ ಕಾರಣ ಇಬ್ಬರು ಶನಿವಾರದಿಂದ ನಾಪತ್ತೆಯಾಗಿದ್ದರು. ಇದೀಗ ಇಬ್ಬರ ಶವ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಪತ್ತೆಯಾಗಿದೆ. ಘಟನೆ ಕೊಳಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.