
ಮಂಗಳೂರು : ಇತ್ತೀಚೆಗೆ ಪತ್ರಿಕೆಯಲ್ಲಿ ಸುಮಾರು 30 ವರ್ಷಗಳ ಹಿಂದೆ ಗತಿಸಿದ ಹೆಣ್ಣು ಮಗುವಿಗೆ ಅದೇ ಜಾತಿಯ ಬೇರೆ ಗೋತ್ರದ 30 ವರ್ಷದ ಹಿಂದೆ ತೀರಿ ಹೋದ ಗಂಡು ಮಗುವಿನ ಮನೆಯವರು ಪ್ರೇತ ಮದುವೆ ಮಾಡಿಸಲು ತಯಾರಿದ್ದರೆ ಸಂಪರ್ಕಿಸಿ ಎಂಬ ಜಾಹೀರಾತು ಕರಾವಳಿಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಪುತ್ತೂರಿನ ನಿವಾಸಿಯೊಬ್ಬರ ಮನೆಯಲ್ಲಿ ಇತ್ತೀಚಿನ ಕೆಲವು ವರ್ಷದಲ್ಲಿ ಅವರ ಮನೆ ಹಾಗೂ ಕುಟುಂಬದಲ್ಲಿ ಅಕಾಲಿಕ ಘಟನೆಗಳು ಸಂಭವಿಸತೊಡಗಿತ್ತು. ಈ ಬಗ್ಗೆ ಅನೇಕರನ್ನು ಕೇಳಿದಾಗ ಪ್ರೇತ ಬಾಧೆಯ ಬಗ್ಗೆ ಅವರಿಗೆ ಗೊತ್ತಾಗಿದ್ದು ಈ ಹಿನ್ನೆಲೆ ಪ್ರೇತಕ್ಕೆ ಮದುವೆ ಮಾಡಿಸಲು ಕುಟುಂಬದವರು ಮುಂದಾಗಿದ್ದಾರೆ.
ಕುಟುಂಬವು ಪ್ರೇತ ವರ ಬೇಕಾಗಿರುವ ಬಗ್ಗೆ ಅನೇಕ ಕಡೆಗಳಲ್ಲಿ ಕೇಳಿ ನೋಡಿದರೂ ಎಲ್ಲೂ ಪ್ರೇತ ವರ ಸಿಗದಿದ್ದಾಗ ಕೊನೆಯ ಪ್ರಯತ್ನವಾಗಿ ಪತ್ರಿಕೆಯಲ್ಲಿ ಜಾಹೀರಾತನ್ನು ಆ ಕುಟುಂಬದವರು ನೀಡಿದ್ದಾರೆ. ಜಾಹೀರಾತು ಬಳಿಕ ದಿನಕ್ಕೆ 50ಕ್ಕಿಂತಲೂ ಅಧಿಕ ಕರೆ ಬಂದಿವೆ. ಅದಲ್ಲದೇ ಪ್ರೇತ ಮದುವೆಗೆ ಸಂಬಂಧಿಸಿದಂತೆ ಸುಮಾರು 20ಕ್ಕೂ ಅಧಿಕ ಸಂಪರ್ಕ ಸಂಖ್ಯೆಗಳನ್ನು ಗೊತ್ತು ಮಾಡಿ ಮಾತುಕತೆ ನಡೆಸಿ ಮದುವೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ