28.2 C
Udupi
Thursday, April 30, 2026
spot_img
spot_img
HomeBlogಫೆಬ್ರವರಿ 17ರಂದು ಮಹಾಕುಂಭ ಮೇಳಕ್ಕೆ ತೆರಳಲು ಉಡುಪಿಯಿಂದ ವಿಶೇಷ ರೈಲು ವ್ಯವಸ್ಥೆ

ಫೆಬ್ರವರಿ 17ರಂದು ಮಹಾಕುಂಭ ಮೇಳಕ್ಕೆ ತೆರಳಲು ಉಡುಪಿಯಿಂದ ವಿಶೇಷ ರೈಲು ವ್ಯವಸ್ಥೆ

ಉಡುಪಿ: ಕರ್ನಾಟಕದಿಂದ ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುವ ಮಹಾಕುಂಭ ಮೇಳವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ತೆರಳುತ್ತಿದ್ದು ,ಇದೀಗ ಕರಾವಳಿ ಜಿಲ್ಲೆಗಳ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಉಡುಪಿಯಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಉಡುಪಿಯಿಂದ ಫೆಬ್ರವರಿ 17ರ ಮಧ್ಯಾಹ್ನ 12:30ಕ್ಕೆ ರೈಲು ಹೊರಡಲಿದ್ದು ಫೆಬ್ರವರಿ 19 ರ ಬೆಳಗ್ಗೆ 6:30ಕ್ಕೆ ಪ್ರಯಾಗ್ ರಾಜ್ ತಲುಪಲಿದೆ. ಮತ್ತೆ ಫೆಬ್ರವರಿ 20ರ ಸಂಜೆ 6:30 ಕ್ಕೆ ಪ್ರಯಾಗ್ ರಾಜ್ ನಿಂದ ಹೊರಟು ಫೆಬ್ರವರಿ 22ರ ಸಂಜೆ ವೇಳೆಗೆ ಉಡುಪಿಗೆ ಬಂದು ತಲುಪಲಿದೆ ಎಂದು ಕೊಂಕಣ ರೈಲ್ವೆ ಇಲಾಖೆಯು ಅಧಿಸೂಚನೆ ಹೊರಡಿಸಿದೆ.

ಇತ್ತೀಚಿಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಅವರನ್ನು ಭೇಟಿ ಮಾಡಿ ಉಡುಪಿಯಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು ವ್ಯವಸ್ಥೆಯನ್ನು ಕಲ್ಪಿಸುವಂತೆ ಮನವಿ ಮಾಡಿದ್ದು ಇದಕ್ಕೆ ಸಚಿವರು ಶೀಘ್ರವೇ ಸ್ಪಂದಿಸಿದ ಕಾರಣ ರೈಲ್ವೆ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ಫೆಬ್ರವರಿ 14ರ ಮಧ್ಯಾಹ್ನದ ನಂತರ ಬುಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸೂಚಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page