
ಬಂಟ್ವಾಳ: ಮೇ 27ರಂದು ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಈತನ ಜೊತೆಗಿದ್ದ ಕಲಂದರ್ ಶಾಫಿ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರಾದ ದೀಪಕ್, ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಗಾಯಗೊಂಡ ಕಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎಂಬವರ ದೂರಿನಡಿ ರಹೀಂ ಪರಿಚಯಸ್ಥರೇ ಆಗಿರುವ ದೀಪಕ್ ಸುಮಿತ್ ಸೇರಿ 15 ಜನರ ವಿರುದ್ಧ ಎಫ್ ಐ.ಆರ್ ದಾಖಲಾಗಿದೆ.






















































