
ಶಿವಮೊಗ್ಗ : ಸೋಮವಾರ ತಡರಾತ್ರಿ ನಗರದ ಗಾಂಧಿ ಬಜಾರ್ನಲ್ಲಿರುವ ಬಸವೇಶ್ವರ ದೇವಸ್ಥಾನದ ಹಿಂಭಾಗದ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸುಮಾರು 8ಕ್ಕೂ ಅಧಿಕ ಅಂಗಡಿಗಳ ಒಳಗಿದ್ದ ವಸ್ತುಗಳು ಬೆಂಕಿಗೆ ಆಹುತಿಯಾದ ದುರ್ಘಟನೆ ನಡೆದಿದೆ.
ಈ ಹಿನ್ನೆಲೆಯಲ್ಲಿ ಬಟ್ಟೆ ಮಾರುಕಟ್ಟೆ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದ್ದು ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಪಾಲಿಕೆ ಆಯುಕ್ತ ಕವಿತಾ ಯೋಗಪ್ಪನವರ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.