
ಜಂಜ್ಗಿರ್-ಚಂಪಾ: ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರ ಸಂಪತ್ತು ಕಸಿದು, ಹೆಚ್ಚು ಮಕ್ಕಳ ಹೆರುವವರಿಗೆ ನೀಡುತ್ತಾರೆ ಎಂಬ ಹೇಳಿಕೆ ನೀಡಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಡವರು ಹೆಚ್ಚು ಮಕ್ಕಳನ್ನು ಹೆರುತ್ತಾರೆ. ಆದರೆ ಮೋದಿ ಕೇವಲ ಮುಸ್ಲಿಮರನ್ನೇ ಏಕೆ ಗುರಿ ಮಾಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.
ಬಡವರು ಆಸ್ತಿ ಇಲ್ಲದ ಕಾರಣ ಹೆಚ್ಚು ಮಕ್ಕಳನ್ನು ಹೊಂದುತ್ತಾರೆ. ಆದರೆ ಪ್ರಧಾನಿ ಮೋದಿ ಮಾತ್ರ ಏಕೆ ಮುಸ್ಲಿಮರನ್ನು ಗುರಿ ಮಾಡುತ್ತಾರೆ? ಅವರು ಚುನಾವಣೆ ಬಂದಾಗ ಈ ರೀತಿಯ ಹಿಂದೂ ಮುಸ್ಲಿಂ ವಿಷಯವನ್ನು ತೆಗೆಯುತ್ತಾರೆ. ಅವರಿಗೆ ಎಲ್ಲರನ್ನು ಒಗ್ಗೂಡಿಸಿಕೊಂಡು ದೇಶ ನಡೆಸಲು ಆಗುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.