
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿಪಕ್ಷ ನಾಯಕನಾಗಿ ತಮ್ಮ ಮೊದಲ ಭಾಷಣ ಮಾಡಿದ್ದು ಈ ವೇಳೆ ನಾನು ಹೇಳುವುದನ್ನು ಬೇಕಾದರೆ ಬರೆದಿಟ್ಟುಕೊಳ್ಳಿ, ಮುಂದಿನ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಇಂಡಿಯಾ ಮೈತ್ರಿಕೂಟ ಸೋಲಿಸಲಿದೆ ಎಂದು ಬಿಜೆಪಿಗೆ ಸವಾಲೆಸೆದಿದ್ದಾರೆ.
ಬಿಜೆಪಿಯು ರಾಹುಲ್ ಪದೇ ಪದೇ ಗುಜರಾತ್‌ಗೆ ಹೋಗಿ ಏನು ಮಾಡುತ್ತಾರೆ ಎಂದು ವ್ಯಂಗ್ಯವಾಡಿದ್ದು ಇದಕ್ಕೆ ತಿರುಗೇಟು ನೀಡಿದ ರಾಹುಲ್ ಗಾಂಧಿ, ಬರೆದಿಟ್ಟುಕೊಳ್ಳಿ ಮುಂದಿನ ಗುಜರಾತ್ ಚುನಾವಣೆಯಲ್ಲಿ ಇಂಡಿಯಾ ಕೂಟ ಕಾಂಗ್ರೆಸ್‌ನ್ನು ಸೋಲಿಸಲಿದೆ. ಅಲ್ಲದೇ ಇಂಡಿಯಾ ಕೂಟ ಎಂಬ ಐಡಿಯಾದ ಮೇಲೆ ವ್ಯವಸ್ಥಿತ ಹಾಗೂ ದೊಡ್ಡ ಮಟ್ಟದಲ್ಲಿ ದಾಳಿ ನಡೆಯುತ್ತಿದೆ ಎಂದು ಆರೋಪಿಸಿದರು.