
ಬೆಂಗಳೂರು: ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಸುಪ್ರೀಂ ಕೋರ್ಟ್ ಗೆ ಸೋಮವಾರದ ಒಳಗೆ ಬರ ಪರಿಹಾರ ಕೊಡುವ ಬಗ್ಗೆ ನಿರ್ಧಾರ ಕೈ ಕೊಳ್ಳುತ್ತೇವೆ ಎಂದು ತಿಳಿಸಿದ್ದು ಇದರಿಂದ ಸಿಟ್ಟಿಗೆದ್ದ ರಾಜ್ಯ ಸರ್ಕಾರವು ಇಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಕೇಂದ್ರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.ಇದುವರೆಗೆ ಕೇಂದ್ರ ಮಾಡಿರುವ ಅನ್ಯಾಯ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು, ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ.