
ಹೆಬ್ರಿ : ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಕಲಿಸುವ ಶಿಕ್ಷಣ ಇಂದಿನ ಅಗತ್ಯವಾಗಿದೆ. ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಮಕ್ಕಳು ವಿವಿಧ ಹವ್ಯಾಸಗಳನ್ನು ಬೆಳೆಸಿಕೊಂಡರೆ ಸಮಯದ ಸದುಪಯೋಗದ ಜೊತೆಗೆ ಓದಿನಲ್ಲೂ ಪ್ರತಿಭಾವಂತರಾಗುತ್ತಾರೆ. ಗ್ರಾಮೀಣ ಭಾಗದ ತುಂಡುಗುಡ್ಡೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಿದ್ದರೂ ಈ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ದೊರಕುತ್ತಿದೆ.ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಊರಿನ ಕೀರ್ತಿಯನ್ನು ಬೆಳಗಿಸಿದ್ದಾರೆ.ಹಳ್ಳಿಯ ಶಾಲೆಯಲ್ಲಿ ಪ್ರತಿವರ್ಷವೂ ಪ್ರತಿಭಾ ಪುರಸ್ಕಾರ ನಡೆಸುತ್ತಿರುವುದು ಶ್ಲಾಘನೀಯವಾದುದು ಎಂದು ನಾರಾಯಣಗುರು ಅಭಿವೃದ್ಧಿ ನಿಗಮದ ರಾಜ್ಯಾ ಧ್ಯಕ್ಷರಾದ ಎಂ. ಮಂಜುನಾಥ ಪೂಜಾರಿ ಹೇಳಿದರು.
ಅವರು ಮುದ್ರಾಡಿ ಗ್ರಾಮದ ತುಂಡುಗುಡ್ಡೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಮತ್ತು ಪೋಷಕರ ಜಂಟಿ ಆಶ್ರಯದಲ್ಲಿ ನಡೆದ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಶಾಲಾ ವತಿಯಿಂದ ನಡೆದ ಸಮ್ಮಾನವನ್ನು ಸ್ವೀಕರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ ಶಿವಪುರ, ಪಂಚಾಯತ್ ನ ಹಿರಿಯ ಸದಸ್ಯರಾದ ಗಣಪತಿ ಎಂ., ತುಂಡುಗುಡ್ಡೆ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಗುಣಕರ ಶೆಟ್ಟಿ, ಮುದ್ರಾಡಿ ಕ್ಲಸ್ಟರ್ ಸಿಆರ್ ಪಿ ರಾಘವೇಂದ್ರ ಆಚಾರ್ಯ, ನೆಲ್ಲಿಕಟ್ಟೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ರವೀಂದ್ರ ಹೆಗ್ಡೆ ಪಾಡಿಗಾರ ಮಾತನಾಡಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶಾಂತಾ ದಿನೇಶ್ ಪೂಜಾರಿ, ಮಾಜಿ ಸದಸ್ಯರಾದ ಸಂತೋಷ ಕುಮಾರ್ ಶೆಟ್ಟಿ ಮತ್ತು ಶ್ಯಾಮ ಶೆಟ್ಟಿ ಬಲ್ಲಾಡಿ, ಹಿರಿಯ ನಾಟಕ ಕಲಾವಿದರಾದ ಸುಧಾಕರ್ ಶೆಟ್ಟಿ ಬಲ್ಲಾಡಿ, ವರಂಗ ಬೈದಶ್ರೀ ಫ್ರೆಂಡ್ಸ್ ಅಧ್ಯಕ್ಷರಾದ ಸುಂದರ ಪೂಜಾರಿ, ಶಾಲಾಭಿಮಾನಿ, ದಾನಿಗಳಾದ ಸುದೀಪ್ ಶೆಟ್ಟಿ ಬಲ್ಲಾಡಿ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಶಂಕರ ಕುಲಾಲ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸೂರಜ್ ಶೆಟ್ಟಿ ಬಲ್ಲಾಡಿ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ಪೂಜಾರಿ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಲೆಗೆ ಉಚಿತವಾಗಿ ಕ್ರೀಡಾ ಸಮವಸ್ತ್ರವನ್ನು ಒದಗಿಸಿದ ಬೈದಶ್ರೀ ಫ್ರೆಂಡ್ಸ್ ಅಧ್ಯಕ್ಷ ಸುಂದರ ಪೂಜಾರಿ, ಯಕ್ಷಗುರು ಸುಬ್ರಮಣ್ಯ ಪ್ರಸಾದ್ ಮುದ್ರಾಡಿ, ಸಾಧಕ ಹಳೆ ವಿದ್ಯಾರ್ಥಿ ಸಾತ್ವಿಕ್ ಕುಲಾಲ್ ಅಡ್ಕ, ತಾಲೂಕು ಮಟ್ಟ ಮತ್ತು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಾದ ಆವಿಷ್ಕಾ ಶೆಟ್ಟಿ, ರಿತೀಕ್ಷಾ ಕುಲಾಲ್, ಪವನ್, ಇಂಪನಾ ಇವರನ್ನು ಗೌರವಿಸಲಾಯಿತು. ಶಾಲಾ ಹಿತೈಷಿಗಳು, ಅಧ್ಯಾಪಕರಾದ ಶಿವರಾಮ ಉಜೂರು ಸನ್ಮಾನಿತರ ಸಾಧನೆಯನ್ನು ಪರಿಚಯಿಸಿದರು. ಬಹುಮಾನ ವಿಜೇತರ ಪಟ್ಟಿಯನ್ನು ಅತಿಥಿ ಶಿಕ್ಷಕಿ ಸುಗುಣ ಹಾಗೂ ಹಳೆ ವಿದ್ಯಾರ್ಥಿನಿ ದೀಕ್ಷಾ ಶೆಟ್ಟಿ ವಾಚಿಸಿದರು. ಶಾಲಾ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕ ಮಾತುಗಳೊಂದಿಗೆ ವರದಿ ಮಂಡಿಸಿದರು. ಎಸ್ ಡಿ ಎಂ ಸಿ ಗೌರವಾಧ್ಯಕ್ಷ ಮಧುಸೂದನ್ ಭಟ್ ಬಲ್ಲಾಡಿ ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘದ ಸದಸ್ಯೆ ಅನುಪಮಾ ವಂದಿಸಿದರು. ಬಲ್ಲಾಡಿ ಚಂದ್ರಶೇಖರ ಭಟ್ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿಯರಾದ ಬಾಬಿ, ಚಿತ್ರಾ ಹಾಗೂ ಶಾಲಾ ಹಿತೈಷಿ ಸುರೇಶ್ ಪೂಜಾರಿ, ಎಸ್ ಡಿ ಎಂ ಸಿ ಸರ್ವಸದಸ್ಯರು, ಹಳೆ ವಿದ್ಯಾರ್ಥಿ ಸಂಫದ ಸರ್ವಸದಸ್ಯರು ಸಹಕರಿಸಿದರು.





