24 C
Udupi
Monday, February 2, 2026
spot_img
spot_img
HomeBlogಬಾಂಗ್ಲಾದೇಶದಲ್ಲಿ ಮುಂದುವರೆದ ಹಿಂಸಾಚಾರ

ಬಾಂಗ್ಲಾದೇಶದಲ್ಲಿ ಮುಂದುವರೆದ ಹಿಂಸಾಚಾರ

24 ಗಂಟೆಗಳಲ್ಲಿ ಇಬ್ಬರು ಹಿಂದೂಗಳ ಹತ್ಯೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ತೀವ್ರಗೊಂಡಿದ್ದು ಕಳೆದ 24 ಗಂಟೆಗಳಲ್ಲಿ ಇಬ್ಬರು ಹಿಂದೂ ಯುವಕರನ್ನು ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲಾದ ಚೋರ್ಸಿಂದೂರ್ ಬಜಾರ್‌ನಲ್ಲಿ ದಿನಸಿ ಅಂಗಡಿ ಮಾಲೀಕ ಶರತ್ ಚಕ್ರವರ್ತಿ ಮೋನಿ ಮೇಲೆ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡ ಮೋನಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇದಕ್ಕೂ ಮೊದಲು, ಸೋಮವಾರ ಸಂಜೆ 6 ಗಂಟೆ ಸುಮಾರಿಗೆ, ಜಶೋರ್ ಜಿಲ್ಲೆಯ ಮಣಿರಾಂಪುರ ಉಪಜಿಲ್ಲಾದ ಕೊಪಾಲಿಯಾ ಬಜಾರ್‌ನಲ್ಲಿ 45 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಇದು 18 ದಿನಗಳಲ್ಲಿ ನಡೆದ ಆರನೇ ಹಿಂದೂ ವ್ಯಕ್ತಿಯ ಕೊಲೆಯಾಗಿದೆ.

ಕೆಲವು ಪುರುಷರು ಬೈಕ್ನಲ್ಲಿ ಬಂದು ಅವರನ್ನು ಕಾರ್ಖಾನೆಯಿಂದ ಹೊರಗೆಳೆದು, ಒಂದು ಗಲ್ಲಿಗೆ ಕರೆದೊಯ್ದು ಅವರ ತಲೆಗೆ ಹಲವು ಬಾರಿ ಗುಂಡು ಹಾರಿಸಿದ್ದರು. ಅಷ್ಟೇ ಅಲ್ಲದೆ ಕುತ್ತಿಗೆ ಕೊಯ್ದು ಪರಾರಿಯಾಗಿದ್ದರು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಪೊಲೀಸರು ದೇಹದಿಂದ ಏಳು ಖಾಲಿ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದು ರಾಣಾ ಪ್ರತಾಪ್ ಅವರ ತಲೆಗೆ ಮೂರು ಗುಂಡುಗಳು ತಗುಲಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಘಟನೆಗಳ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ದ್ವೇಷವನ್ನು ಗಂಭೀರ ವಿಷಯವೆಂದು ಬಣ್ಣಿಸಿದೆ. ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ಬಾಂಗ್ಲಾದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಮತ್ತು ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ದಾಳಿಗಳನ್ನು ತೀವ್ರವಾಗಿ ಖಂಡಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page