
ಕೊಡಗು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಆದರೆ ರುಂಡ ಮಾತ್ರ ಇನ್ನೂ ಪತ್ತೆಯಾಗಿಲ್ಲ.
ಕೊಡಗಿನಲ್ಲಿ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಏಕೈಕ ವಿದ್ಯಾರ್ಥಿನಿಯಾಗಿದ್ದ ಮೀನಾಳ ಫಲಿತಾಂಶ ಬಂದ ದಿನವೇ ಆಕೆಯ ಭೀಕರ ಹತ್ಯೆಯಾಗಿತ್ತು. ಬೆಳಗ್ಗೆಯಿಂದಲೂ ತಾನು ಪಾಸಾದ ಖುಷಿಯಲ್ಲಿದ್ದು ಶಾಲೆಯತ್ತ ಬಂದು ತೇರ್ಗಡೆಯಾದ ಖುಷಿಯಲ್ಲಿ ಮನೆಗೆ ಹೋಗುತ್ತಿದ್ದಳು. ಇದೇ ಸಂದರ್ಭದಲ್ಲಿ ಆಕೆಯನ್ನು ಅಡ್ಡಗಟ್ಟಿ ಪ್ರಕಾಶ್ ಹತ್ಯೆ ಮಾಡಿದ್ದನು.