
ಭಾರಿ ಬಜೆಟ್ನಲ್ಲಿ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ಬಿಡುಗಡೆಯಾಗಲಿದ್ದು ಸೆಪ್ಟೆಂಬರ್ 26ರಂದು ಈ ಸಿನಿಮಾದ ಟಿಕೆಟ್ ಬುಕಿಂಗ್ ಆರಂಭವಾಗಲಿದೆ.
ಇತ್ತೀಚೆಗೆ ಸರ್ಕಾರವು ಕರ್ನಾಟಕದಲ್ಲಿ ಸಿನಿಮಾ ಟಿಕೆಟ್ ದರ 200 ರೂಪಾಯಿ ಮೀರಬಾರದು ಎಂದು ಆದೇಶ ಹೊರಡಿಸಿದ್ದು ಆದರೆ ಸದ್ಯ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೀಗಾಗಿ ‘ಕಾಂತಾರ: ಚಾಪ್ಟರ್ 1’ ಟಿಕೆಟ್ ಬೆಲೆ ಸಹಜವಾಗಿಯೇ ದುಬಾರಿ ಆಗಲಿದೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಸೆಪ್ಟೆಂಬರ್ 26ರ ಮಧ್ಯಾಹ್ನ 12.29ಕ್ಕೆ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬುಕ್ಕಿಂಗ್ ಆರಂಭವಾಗಲಿದ್ದು ವಿಜಯ್ ಕಿರಗಂದೂರು ಅವರ ನಿರ್ಮಾಣ, ರಿಷಬ್ ಶೆಟ್ಟಿ ಅವರ ನಿರ್ದೇಶನ ಹಾಗೂ ನಟನೆಯಲ್ಲಿ ಮೂಡಿ ಬಂದ ಚಿತ್ರದ ಮೇಲೆ ಜನರಿಗೆ ಭಾರಿ ನಿರೀಕ್ಷೆ ಇದೆ.






















































