
ಹಲವು ವಿವಾದಗಳ ಮೂಲಕ ಸುದ್ದಿಯಾಗಿ, ಹಿಂದೂಪರ ಭಾಷಣಗಳ ಮೂಲಕ ಗುರುತಿಸಿಕೊಂಡಿದ್ದ ಚೈತ್ರ ಕುಂದಾಪುರ ಇದೀಗ ಬಿಗ್ ಬಾಸ್ ಸೀಸನ್ 11ಕ್ಕೆ ಸ್ಪರ್ಧಿಯಾಗಿ ಎಂಟ್ರಿ ಪಡೆದುಕೊಂಡಿದ್ದಾರೆ.
ಕುಂದಾಪುರದಲ್ಲಿ ಪಿಯುಸಿವರೆಗೆ ವ್ಯಾಸಂಗ ಮಾಡಿದ ಚೈತ್ರಾ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪಡೆದು, ಉಡುಪಿ ಮತ್ತು ಬೆಂಗಳೂರಿನಲ್ಲಿ ಖಾಸಗಿ ವಾಹಿನಿಯಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದರು. ಹಲವು ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಚೈತ್ರ ಭಾಷಣಕಾರರಾಗಿ ಪ್ರಖ್ಯಾತಿಯನ್ನು ಪಡೆದಿದ್ದರು.
ಇದೀಗ ಸೆಪ್ಟೆಂಬರ್ 29ರಂದು ಅಧಿಕೃತವಾಗಿ ಚಾಲನೆ ದೊರಕಲಿರುವ ಬಿಗ್ ಬಾಸ್ ಗೆ ಮೊದಲನೇ ಸ್ಪರ್ಧಿಯಾಗಿ ಗೌತಮಿ ಜಾದವ್ ಆಯ್ಕೆಯಾಗಿದ್ದರೆ, ಮೂರನೇ ಸ್ಪರ್ಧಿಯಾಗಿ ಚೈತ್ರಾ ಕುಂದಾಪುರ ಎಂಟ್ರಿ ಕೊಟ್ಟಿದ್ದಾರೆ.













