
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರಿಗೆ ಕೋರ್ಟ್ ಜಾಮೀನು ನೀಡಿದ ವಿಚಾರವಾಗಿ ಮಾತನಾಡಿದ್ದು ಈ ವೇಳೆ ರಾಜ್ಯದಲ್ಲಿ ಏನಾದ್ರೂ ನಾನೇ ಕಾರಣನಾ? ಬಿಜೆಪಿಯವರ ಮನೆಯಲ್ಲಿ, ಪಕ್ಷದಲ್ಲಿ ಅಷ್ಟೇ ಯಾಕೆ, ಅವರ ಹೊಟ್ಟೆ ಒಳಗೆ ಏನಾದ್ರೂ ನಾನೇ ಕಾರಣನಾ? ಎಂದು ಪ್ರಶ್ನೆ ಮಾಡಿದ್ದಾರೆ.
ಬೇಲ್ ವಿಚಾರ ಕೋರ್ಟ್‌ಗೆ ಸಂಬಂಧಿಸಿದ್ದು, ಕಾನೂನು ಉಂಟು, ಕೋರ್ಟ್ ಉಂಟು, ಅವರು ಉಂಟು ಎಲ್ಲದಕ್ಕೂ ನನ್ನನ್ನ ಕೇಳಿದ್ರೆ ಹೇಗೆ? ರಾಜ್ಯದಲ್ಲಿ ಏನಾದ್ರೂ ನಾನೇ ಕಾರಣ, ಅವರ ಪಕ್ಷ, ಹೊರಗಡೆ, ಮನೆ, ಹೊಟ್ಟೆ ಒಳಗೆ ಏನಾದ್ರೂ ಎಲ್ಲದಕ್ಕೂ ನಾನೇ ಕಾರಣ. ನನ್ನ ನೆನಸಿಕೊಂಡಿಲ್ಲ ಅಂದ್ರೆ ಅವರಿಗೆ ನಿದ್ದೆ ಬರಲ್ಲ ಎಂದು ವ್ಯಂಗ್ಯವಾಡಿದರು.
ಸಿ.ಟಿ ರವಿ ಮೇಲೆ ನನಗೂ ಸಿಂಪತಿ ಇತ್ತು. ಚಿಕ್ಕಮಗಳೂರು ಜನ ಅಂದರೆ ಸಂಸ್ಕೃತಿಯುಳ್ಳ ಜನ. ಆದ್ರೆ ಆ ಪಾರ್ಟಿಯಲ್ಲಿ ಇರೋರು ಹೆಣ್ಣು ಮಕ್ಕಳ ಬಗ್ಗೆ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಇದ್ದಲ್ಲಿ ಆತ್ಮಸಾಕ್ಷಿ ಮುಖ್ಯ ಆಗುತ್ತೆ. ಪಕ್ಷದ ಲೀಡರ್‌ಗೆ ಸುಮ್ಮನೆ ಸಪೋರ್ಟ್ ಮಾಡೋದಲ್ಲ, ಅದನ್ನ ಖಂಡಿಸಬೇಕಲ್ವಾ..? ಸರಿ ಇಲ್ಲ ಅಂತ ಹೇಳಬೇಕಲ್ವಾ? ನನ್ನ ಪಕ್ಷದಲ್ಲಿ ಮಾತಾಡಿದ್ರೆ ಖಂಡಿಸ್ತಿದ್ದೆ ಎಂದು ಹೇಳಿದರು.