
ನವದೆಹಲಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದ್ದು, ಸರಿಯಾಗಿ ಉತ್ತರ ನೀಡದೆ ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನ ,ಪಕ್ಷ ಶಿಸ್ತು ಉಲ್ಲಂಘನೆ ಮಾಡಿದ್ದರಿಂದ ಇದೀಗ ಬಿಜೆಪಿ ಹೈಕಮಾಂಡ್ ಯತ್ನಾಳ್ ರವರನ್ನು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಅಧಿಕಾರ ಹಂಚಿಕೆಯ ಬಗ್ಗೆ ಬಹಿರಂಗವಾಗಿ ಆರೋಪಗಳನ್ನು ಮಾಡುತ್ತಿದ್ದು, ಕಳೆದ ಕೆಲವು ತಿಂಗಳಿಂದ ಬಿಜೆಪಿ ಬಣ ಬಡಿದಾಟ ನಡೆಯುತ್ತಿದ್ದು, ಇದೀಗ ಯತ್ನಾಳ್ ಉಚ್ಚಾಟನೆಯಿಂದ ಬಣ ಬಡಿದಾಟಕ್ಕೂ ಹೈಕಮಾಂಡ್ ಕೊನೆಗೂ ಬ್ರೇಕ್ ಹಾಕಿದೆ.