ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಲಿ, ಉಚ್ಚಾಟನೆಯ ಕುರಿತು ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರು: ಶಾಸಕರಾದ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ.
ಪಕ್ಷ ವಿರೋಧಿ ಹೇಳಿಕೆ ಹಾಗೂ ಇತ್ತೀಚಿಗೆ ಕಾಂಗ್ರೆಸ್ ನಾಯಕರ ಜೊತೆ ಗುರುತಿಸಿಕೊಂಡಿದ್ದ ಕಾರಣ ಇಬ್ಬರು ನಾಯಕರನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದರು.
ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಉಚ್ಛಾಟನೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಶಿವಕುಮಾರ್, ಅವರಿಬ್ಬರೂ ವಿಧಾನಸೌಧದಲ್ಲಿ ಯಾರನ್ನು ರೇಪ್ ಮಾಡಿರಲಿಲ್ಲ ಅಲ್ವಾ ಎಂದು ಪ್ರಶ್ನಿಸುವ ಮೂಲಕ ಯಾರಿಗೂ ಹೆಚ್ಐವಿ ಇಂಜೆಕ್ಷನ್ ಚುಚ್ಚಿರಲಿಲ್ಲ ಅಲ್ವಾ? ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಲಿ ಎಂದು ಪರೋಕ್ಷವಾಗಿ ಮುನಿರತ್ನ ಉಚ್ಚಾಟನೆ ಏಕೆ ಇಲ್ಲ ಎಂದು ಪ್ರಶ್ನಿಸಿದ್ದಾರೆ.






















































