24.9 C
Udupi
Friday, March 21, 2025
spot_img
spot_img
HomeBlogಬಿಜೆಪಿ ಈ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಎಲ್ಲಾ ವಿಪಕ್ಷ ನಾಯಕರನ್ನೂ ಜೈಲಿಗೆ ತಳ್ಳಲಿದೆ: ಅರವಿಂದ್ ಕೇಜ್ರಿವಾಲ್

ಬಿಜೆಪಿ ಈ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಎಲ್ಲಾ ವಿಪಕ್ಷ ನಾಯಕರನ್ನೂ ಜೈಲಿಗೆ ತಳ್ಳಲಿದೆ: ಅರವಿಂದ್ ಕೇಜ್ರಿವಾಲ್

ನವದೆಹಲಿ: ಅಬಕಾರಿ ಹಗರಣದಲ್ಲಿ ಮಧ್ಯಂತರ ಜಾಮೀನು ಪಡೆದು ಶುಕ್ರವಾರವಷ್ಟೇ ಬಿಡುಗಡೆಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಶನಿವಾರ ತಮ್ಮ ಪಕ್ಷದ ಮುಖ್ಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು ಈ ವೇಳೆ ಬಿಜೆಪಿ ಈ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಎಲ್ಲಾ ವಿಪಕ್ಷ ನಾಯಕರು ಅಂದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶಿವಸೇನೆ ನಾಯಕ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಸೇರಿದಂತೆ ಎಲ್ಲಾ ಪ್ರತಿಪಕ್ಷ ನಾಯಕರೂ ಜೈಲಿಗೆ ಹೋಗಲಿದ್ದಾರೆ ಎಂದು ಹೇಳಿದ್ದಾರೆ.

‘ಬಿಜೆಪಿ ಈ ಬಾರಿ ಅಧಿಕಾರಕ್ಕೆ ಮರಳುವುದಿಲ್ಲ. ಇಂಡಿಯಾ ಒಕ್ಕೂಟ ಗೆದ್ದು ಜೂ.4ರಂದು ಸರ್ಕಾರ ರಚಿಸಲಿದೆ. ಜೈಲಿನಿಂದ ಬಿಡುಗಡೆಯಾದ ಬಳಿಕ 20 ತಾಸುಗಳಲ್ಲಿ ನಾನು ರಾಜಕೀಯ ಪಂಡಿತರು ಹಾಗೂ ಜನರ ಜೊತೆಗೆ ಮಾತನಾಡಿದೆ. ಅವರೆಲ್ಲರೂ ಬಿಜೆಪಿ ಗೆಲ್ಲುವುದಿಲ್ಲ ಎಂದು ಹೇಳಿದರು’ ಎಂದು ತಿಳಿಸಿದರು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page