28.9 C
Udupi
Thursday, April 30, 2026
spot_img
spot_img
HomeBlogಬಿಜೆಪಿ ನಾಯಕರು ಸರ್ಕಾರವನ್ನು ಬುಡಮೇಲು ಮಾಡಲು ಅಮಿತ್ ಶಾ ಸಲಹೆ ಪಡೆದಿದ್ದಾರೆ: ಪರಿಷತ್ ಸದಸ್ಯ ಬಿಕೆ...

ಬಿಜೆಪಿ ನಾಯಕರು ಸರ್ಕಾರವನ್ನು ಬುಡಮೇಲು ಮಾಡಲು ಅಮಿತ್ ಶಾ ಸಲಹೆ ಪಡೆದಿದ್ದಾರೆ: ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್

ಬೆಂಗಳೂರು: ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ವಿಧಾನಸೌಧದಲ್ಲಿ ಮಾತನಾಡಿ ಬಿಜೆಪಿ ನಾಯಕರು ಸರ್ಕಾರವನ್ನು ಬುಡಮೇಲು ಮಾಡುವುದರಲ್ಲಿ ಡಾಕ್ಟರೇಟ್ ಮಾಡಿರುವ ಅಮಿತ್ ಶಾ ಸಲಹೆ ಪಡೆದು ಬಂದಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಸರ್ಕಾರದಲ್ಲಿ ಲಾ ಅಂಡ್ ಆರ್ಡರ್ ಸರಿಯಿಲ್ಲ ಎಂದು ಹೇಳಿ ಬಿಜೆಪಿ ಚರಂಡಿಯಲ್ಲಿ ಮೀನು ಹಿಡಿಯುವ ಪ್ರಯತ್ನ ಮಾಡಿದೆ. ಹಿಂದೂಗಳ ಲ್ಯಾಬೊರೇಟರಿ ಆಗಿದ್ದಂತಹ ದಕ್ಷಿಣ ಕನ್ನಡದಲ್ಲಿ ಶಾಂತಿ ನೆಲಸಲು ಸಿದ್ದರಾಮಯ್ಯ ಅವರ ದಿಟ್ಟ ನಿರ್ಧಾರ ಕಾರಣ. ಈಗ ಅಲ್ಲಿ ಶಾಂತಿ ನೆಲೆಸಿರುವುದರಿಂದ ಬಿಜೆಪಿಗೆ ರೋಟಿ, ಕಪಡಾ, ಮಕಾನ್ ಬಂದ್ ಆಗಿದೆ. ಅದನ್ನು ಪುನರ್ ಸ್ಥಾಪನೆ ಮಾಡಲು ಬೇರೆ ಜಿಲ್ಲೆಯಲ್ಲಿ ಹೋಗಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯವರು ಯಾವಾಗಲೂ ಪಾಳುಬಿದ್ದ ಸ್ಮಶಾನ, ಪಾಳುಬಿದ್ದ ದೇವಸ್ಥಾನ ಹುಡುಕಿ ರಾಜಕೀಯ ಮಾಡುತ್ತಾರೆ. ಬಿಜೆಪಿಯಲ್ಲಿರುವ ಸ್ವಯಂ ಸೇವಕ ಸಂಘದ ಅಗ್ರಗಣ್ಯ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಬಿ.ಎಲ್ ಸಂತೋಷ್ ನಡುವಿನ ಜಗಳ ಧರ್ಮಸ್ಥಳವನ್ನ ಹಾಳು ಮಾಡುತ್ತಿದೆ. ಅಲ್ಲಿ ಶಾಂತಿ ನೆಲೆಸಿರುವುದು ಇವರಿಗೆ ಹಿಡಿಸುತ್ತಿಲ್ಲ. ಏನಾದರೂ ಮಾಡಿ ಕೆದಕಲು ನೋಡುತ್ತಿದ್ದಾರೆ, ಅದು ನಡೆಯಲ್ಲ. ಪೊಲೀಸರು ಸರಿಯಾದ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page