
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆ ನಾಲ್ವರು ಪದಾಧಿಕಾರಿಗಳನ್ನು ಉಚ್ಛಾಟನೆ ಮಾಡಲಾಗಿದೆ.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚದ ಪ್ರಧಾನ ಕಾರ್ಯದರ್ಶಿ ಜುನೈದ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್ ಇವರಿಗೆ ಪಕ್ಷದ ನಿಯಮ ಉಲ್ಲಂಘನೆ ಮಾಡಿರುವ ಸ್ಪಷ್ಟೀಕರಣಕ್ಕೆ ಕಾರಣ 48 ಗಂಟೆಗಳ ಸಮಯ ನೀಡಲಾಗಿದ್ದು, ಇದೀಗ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.