
ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಬಿಜೆಪಿ ವಿರುದ್ಧ 40% ಜಾಹೀರಾತು ಪ್ರಕರಣದಲ್ಲಿ ,ಜೂನ್ 7ರಂದು 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ.
ಮಾಜಿ ಸಂಸದ ಡಿ.ಕೆ ಸುರೇಶ್ ರಾಹುಲ್ ಗಾಂಧಿ ಅವರಿಗೆ 50 ಸಾವಿರ ರೂ. ಮೌಲ್ಯದ ಪ್ರಾಪರ್ಟಿ ಶ್ಯೂರಿಟಿ ನೀಡಿದ್ದು, ಜಾಮೀನು ಮಂಜೂರು ಮಾಡಲಾಗಿದೆ. ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿ ಅವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶ ನೀಡಿತ್ತು.
ಎರಡು ಬಾರಿ ವಿಚಾರಣೆಗೆ ವಿನಾಯಿತಿ ಪಡೆದು ಗೈರಾಗಿದ್ದ ರಾಹುಲ್ ಗಾಂಧಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕಿದ್ದು 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ರಾಹುಲ್ ಗಾಂಧಿ ಹಾಜರಾಗಿದ್ದು ಅರ್ಜಿಯನ್ನ ಪುರಸ್ಕರಿಸಿದ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ.