
ನವದೆಹಲಿ: ಬಿಜೆಪಿ ಹಿರಿಯ ನಾಯಕ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (98) ನವರಿಗೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಬುಧವಾರ ಅನಾರೋಗ್ಯಕ್ಕೆ ತುತ್ತಾಗಿದ್ದ ಅಡ್ವಾಣಿಯವರನ್ನು ಏಮ್ಸ್ ಆಪ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ,ಚೇತರಿಕೆ ಕಂಡು ಬಂದ ಹಿನ್ನೆಲೆ ಬಿಡುಗಡೆ ಮಾಡಲಾಗಿತ್ತು. ಇದೀಗ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಅಪೊಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿಕೆಯಲ್ಲಿ ತಿಳಿಸಿದೆ.