
ಮೈಸೂರು: ಮೈಸೂರು ಸಂಸದ ಪ್ರತಾಪ್ ಸಿಂಹ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಎಂಎಲ್‌ಸಿ ಟಿಕೆಟ್ ನೀಡದ್ದಕ್ಕೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಡುಪಿ ಶಾಲೆಯೊಂದರಲ್ಲಿ ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ ಎಂಎಲ್ ಟಿಕೆಟ್ ಸಿಗಲಿಲ್ಲ ಎಂಎಲ್‌ಸಿ ಟಿಕೆಟ್ಟನ್ನೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಛಾಟನೆಗೆ ಒಳಗಾಗಿ ಬುರ್ಖಾ ಸ್ಟೂಡೆಂಟ್ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ ಎಂದು ಬರೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.