
ರಾಜ್ಯಗಳಿಗೆ ಕೇಂದ್ರದಿಂದ ದೊರೆಯುವ ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು 14ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಶೇ.4.71ರಷ್ಟು ಪಾಲು ದೊರಕಿತ್ತು. ಆದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಅದು ಇನ್ನೂ ಕಡಿಮೆಯಾಗಿ ಶೇ.3.64ಕ್ಕೆ ಇಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
14ನೇ ಹಣಕಾಸು ಆಯೋಗಕ್ಕಿಂತ ಹೆಚ್ಚುವರಿ ಪಾಲು ನೀಡುವಂತೆ ಬೇಡಿಕೆ ಇಟ್ಟಿದ್ದರೂ, ಅಂತಿಮವಾಗಿ ಕೇವಲ ಶೇ.4.131ರಷ್ಟೇ ಮಂಜೂರು ಮಾಡಲಾಗಿದೆ. ಇದು ಕರ್ನಾಟಕ ರಾಜ್ಯಕ್ಕೆ ಮಾಡಿದ ದೊಡ್ಡ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.



















