
ಬೆಂಗಳೂರು: ಕಿವುಡ, ಮೂಗರ ಬಗ್ಗೆ ಸಮಾಜದಲ್ಲಿ ಕೆಟ್ಟ ಭಾವನೆ ಬರುವ ರೀತಿಯಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಇಬ್ಬರು ಯುವಕರನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ರೋಹನ್ ಕಾರ್ಯಪ್ಪ, ಶರವಣ ಭಟ್ಟಾಚಾರ್ಯ ಇಬ್ಬರು ಯುವಕರು ಇನ್ಸ್ಟ್ ಗ್ರಾಂ ನಲ್ಲಿ ಕಿವುಡ ಮತ್ತು ಮೂಗರ ಬಗ್ಗೆ ಅಪಹಾಸ್ಯ ಮಾಡುವಂತೆ ರೀಲ್ಸ್ ಮಾಡಿ ಅಪ್ಲೋಡ್ ಮಾಡಿದ್ದು, ಇವರ ಬಗ್ಗೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ವಿಶೇಷ ಚೇತನರು ದೂರು ದಾಖಲಿಸಿದ್ದರು. ಅಷ್ಟೇ ಅಲ್ಲದೆ ದೆಹಲಿಯ ಪೊಲೀಸ್ ಠಾಣೆಯಲ್ಲೂ ಆನ್ಲೈನ್ ಮೂಲಕ ದೂರು ಸಲ್ಲಿಸಲಾಗಿತ್ತು. ಇದೀಗ ಇವರಿಬ್ಬರನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.











