27.9 C
Udupi
Thursday, July 9, 2026
spot_img
spot_img
HomeBlogಬೆಂಗಳೂರು: ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ದೈಹಿಕ ಶಿಕ್ಷಕನ ವಿರುದ್ಧ ಕೊಲೆ...

ಬೆಂಗಳೂರು: ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ದೈಹಿಕ ಶಿಕ್ಷಕನ ವಿರುದ್ಧ ಕೊಲೆ ಪ್ರಕರಣ

ಬೆಂಗಳೂರು: ನಗರದ ಹೊರವಲಯದ ಕಾಡಯರಪ್ಪನಹಳ್ಳಿ ಸಮೀಪದ ಖಾಸಗಿ ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಬಾಲಕನ ಸಾವಿಗೆ ದೈಹಿಕ ಶಿಕ್ಷಕರ ಹಲ್ಲೆ ಹಾಗೂ ಮಾನಸಿಕ ಒತ್ತಡವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಮೃತ ವಿದ್ಯಾರ್ಥಿಯನ್ನು ಗುರುಕಿರಣ್ ಎಂದು ಗುರುತಿಸಲಾಗಿದೆ. ಸ್ಟರ್ಲಿಂಗ್ ವಸತಿ ಶಾಲೆಯಲ್ಲಿ ಓದುತ್ತಿದ್ದ ಆತನ ಆರೋಗ್ಯ ಹದಗೆಟ್ಟಿದೆ ಎಂದು ಶಾಲೆಯಿಂದ ಬೆಳಗ್ಗೆ ಪೋಷಕರಿಗೆ ಮಾಹಿತಿ ನೀಡಲಾಗಿತ್ತು. ಆದರೆ ಅವರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದನು.

ಪೋಷಕರ ದೂರಿನ ಮೇರೆಗೆ ದೈಹಿಕ ಶಿಕ್ಷಕನ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಬೆಳಗ್ಗೆ ವ್ಯಾಯಾಮಕ್ಕಾಗಿ ಮೈದಾನಕ್ಕೆ ತೆರಳಿದ್ದ ಗುರುಕಿರಣ್ ಎರಡು ಸುತ್ತು ಓಡಿದ ಬಳಿಕ ಏಕಾಏಕಿ ಕುಸಿದು ಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೌಚಾಲಯದಿಂದ ತಡವಾಗಿ ಬಂದ ಕಾರಣ ಶಿಕ್ಷಕ ಹೊಡೆದಿದ್ದರು ಎಂದು ಸಹಪಾಠಿಯೊಬ್ಬ ಹೇಳಿದ್ದಾನೆ. ಸಣ್ಣಪುಟ್ಟ ತಪ್ಪುಗಳಿಗೂ ಕೋಲಿನಿಂದ ಹೊಡೆಯುತ್ತಿದ್ದರು ಎಂಬ ಆರೋಪವನ್ನು ಇತರ ವಿದ್ಯಾರ್ಥಿಗಳೂ ಮಾಡಿದ್ದಾರೆ.

ಘಟನೆಯ ಬಳಿಕ ಆಕ್ರೋಶಗೊಂಡ ಪೋಷಕರು ಶಿಕ್ಷಕನ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಆರೋಪಿತ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page