
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ದೂರು ದಾಖಲಿಸಿರುವ ಸಂತ್ರಸ್ತ ಯುವಕನಿಗೆ ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆ ನಡೆಯಲಿದೆ.ಶನಿವಾರ ತಡರಾತ್ರಿಯೇ ಸಂತ್ರಸ್ತನನ್ನು ಹಾಸನದಿಂದ ಬೌರಿಂಗ್ ಆಸ್ಪತ್ರೆಗೆ ಕರೆತಂದಿರುವ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಹಾಸನದಲ್ಲಿ ವೈದ್ಯಕೀಯ ಪರೀಕ್ಷೆಗೆ ನಿರಾಕರಿಸಿದ ಹಿನ್ನೆಲೆ ಸಂತ್ರಸ್ತನ ಮನವಿ ಮೇರೆಗೆ ಬೆಂಗಳೂರಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಹೊಳೆನರಸೀಪುರ ಪೊಲೀಸರು ತಡರಾತ್ರಿ 2 ಗಂಟೆಗೆ ಸಂತ್ರಸ್ತ ಯುವಕನನ್ನು ಬೌರಿಂಗ್ ಆಸ್ಪತ್ರೆಗೆ ಕರೆತಂದಿದ್ದಾರೆ.