
ಮಂಗಳೂರು: ವಿಧಾನಸಭಾ ಅಧ್ಯಕ್ಷ ಯುಟಿ ಖಾದರ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 8 ರಿಂದ 19 ರವರೆಗೆ ವಿಧಾನ ಮಂಡಲದ ಅಧಿವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದ ಅವರು ಅಧಿಕಾರಿ ವರ್ಗಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಲು ಸೂಚಿಸಲಾಗಿದ್ದು ಸುಮಾರು 6ಕ್ಕೂ ಹೆಚ್ಚು ಮಸೂದೆಗಳು ಮಂಡನೆಗೆ ಸಿದ್ಧವಾಗಿದೆ ಎಂದು ಹೇಳಿದರು.
ಸುವರ್ಣ ಸೌಧದಲ್ಲಿ ನಿರ್ಮಿಸಲಾದ ಉದ್ಯಾನವನ ಉದ್ಘಾಟನೆಗೊಳ್ಳಲಿದ್ದು ಕಲಬುರಗಿ ವಿನೋದ್ ಕುಮಾರ್ ರೇವಪ್ಪ ಅವರು ನಿರ್ಮಿಸಿದ 55×75 ಅಡಿ ಉದ್ದದ ದೇಶದ ಎರಡನೇ ಅತಿ ದೊಡ್ಡ ರಾಷ್ಟ್ರಧ್ವಜವನ್ನು ಸಹ ಪ್ರದರ್ಶಿಸಲಾಗುವುದು ಎಂದು ಮಾಹಿತಿ ನೀಡಿದರು.



















