
ಕಾರ್ಕಳ: ಇಂದು ಬೆಳವಾಯಿಯಲ್ಲಿ ಭಟ್ಕಳ ಕಡೆ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಪಿಕಪ್ ವಾಹನ ಚಾಲಕ ಮೃತಪಟ್ಟ ದುರ್ಘಟನೆ ನಡೆದಿದೆ.
ಕೆಎಸ್ಆರ್ಟಿಸಿ ಕೆಎ31ಎಫ್1445 ನಂಬರ್‌ನ ಬಸ್ಸು ಚಾಲಕ ಬೆಳುವಾಯಿ ಫ್ಲೈ ಓವರ್ ನಲ್ಲಿ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದಾಗ ಎದುರುನಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಪಿಕಪ್ ಚಾಲಕ ಮೃತಪಟ್ಟಿದ್ದಾರೆ. ಮಂಗಳೂರು ಮೂಲದ ಚಾಲಕ ಎಂದು ತಿಳಿದುಬಂದಿದ್ದು ಪಿಕಪ್ ನಲ್ಲಿದ್ದ ಇನ್ನೋರ್ವ ಪ್ರಯಾಣಿಕ ಗಾಯಗೊಂಡಿದ್ದಾರೆ. ಬಸ್ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.







