28.2 C
Udupi
Friday, May 16, 2025
spot_img
spot_img
HomeBlogಬೈಕ್, ಟ್ಯಾಕ್ಸಿ, ಉಬರ್, ರ‍್ಯಾಪಿಡೋ ಸೇವೆಗಳನ್ನು ಜೂನ್ 15ರವರೆಗೆ ವಿಸ್ತರಿಸಿದ ಹೈಕೋರ್ಟ್

ಬೈಕ್, ಟ್ಯಾಕ್ಸಿ, ಉಬರ್, ರ‍್ಯಾಪಿಡೋ ಸೇವೆಗಳನ್ನು ಜೂನ್ 15ರವರೆಗೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಮೋಟಾರ್ ವಾಹನ ಕಾಯ್ದೆಯ ಸೆಕ್ಷನ್ 93ರ ಅಡಿಯಲ್ಲಿ ಸೂಕ್ತ ನಿಯಗಳಿಲ್ಲದ ಕಾರಣ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಇತ್ತೀಚೆಗೆ ಆರು ವಾರಗಳ ಕಾಲಾವಕಾಶ ನೀಡಲಾಗಿದ್ದು ಆದರೆ ಕಂಪನಿಗಳು ಸಲ್ಲಿಸಿದ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಕರ್ನಾಟಕದಲ್ಲಿ ಬೈಕ್, ಟ್ಯಾಕ್ಸಿ ಸೇವೆಯನ್ನು ಜೂನ್‌ 15ರ ವರೆಗೆ ವಿಸ್ತರಿಸಿ ಮಹತ್ವದ ಆದೇಶ ನೀಡಿದೆ.

ರಾಜ್ಯದಲ್ಲಿ ಬೈಕ್‌, ಟ್ಯಾಕ್ಸಿ ಸೇವೆಯನ್ನು ಮುಂದುವರೆಸಲು ನಿರ್ದೇಶನ ಕೋರಿ ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸ್‌ ಲಿಮಿಟೆಡ್ ಸೇರಿದಂತೆ ಇತರೆ ಕಂಪನಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಪರಿಗಣಿಸಿ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರಿದ್ದ ನ್ಯಾಯಪೀಠದಿಂದ ಈ ಆದೇಶ ಹೊರಡಿಸಲಾಗಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು, ರೋಪೆನ್ ಟ್ರಾನ್ಸ್‌ಫರ್ಮೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಪ್ರಕಾರ, ಕರ್ನಾಟಕದಲ್ಲಿ ಆರು ಲಕ್ಷಕ್ಕೂ ಹೆಚ್ಚು ನೋಂದಾಯಿತ ಬೈಕ್ ಟ್ಯಾಕ್ಸಿಗಳಿದ್ದು, ಆ ಮೂಲಕ ಸವಾರರು ತನ್ನ ಜೀವನ ನಡೆಸುತ್ತಿದ್ದಾರೆ. ಒಂದು ವೇಳೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದರೇ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಬಹುದು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರವು ಪ್ರಸ್ತುತ ಬೈಕ್ ಟ್ಯಾಕ್ಸಿಗಳಿಗಾಗಿ ಸಮಗ್ರ ನೀತಿಯನ್ನು ರೂಪಿಸುತ್ತಿದೆ. ಕೈಗೆಟುಕುವ ಬೆಲೆ ಮತ್ತು ಬೇಡಿಕೆ ಹಿನ್ನೆಲೆ ಬೈಕ್ ಟ್ಯಾಕ್ಸಿ ಸೇವೆಗಳು ನಗರ ಪ್ರದೇಶದಲ್ಲಿ ಹೆಚ್ಚುತ್ತಿವೆ. ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15ರ ವರೆಗೆ ನಡೆಸಲು ಅವಕಾಶ ನೀಡಿ ವಿಚಾರಣೆ ಮುಂದೂಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page