
ಕಾರ್ಕಳ: ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಬೋಳ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಹಾಗೂ ನಿರ್ದೇಶಕ ಸ್ಥಾನದಿಂದ ಬೋಳ ಸದಾಶಿವ ಶೆಟ್ಟಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸದಾಶಿವ ಶೆಟ್ಟಿ ಬೋಳ ಅವರು ಸಂಘದ ಉಪನಿಯಮ ಹಾಗೂ ಕಾಯ್ದೆಗೆ ವ್ಯತಿರಿಕ್ತವಾಗಿ ಕರ್ತವ್ಯ ನಿರ್ವಹಿಸಿರುವ ಕಾರಣ ಸಹಕಾರ ಸಂಘಗಳ ಅಧಿನಿಯಮ ಪ್ರಕರಣ 29(ಸಿ) ಪ್ರಕಾರ ಕ್ರಮ ಕೈಗೊಳ್ಳಲಾಗಿದ್ದು ಮುಂದಿನ 5 ವರ್ಷಗಳ ಅವಧಿಗೆ ಬೋಳ ಸಂಘದ ಆಡಳಿತ ಮಂಡಳಿ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಮಾತ್ರವಲ್ಲದೆ ಯಾವುದೇ ಸಹಕಾರಿ ಸಂಘದಲ್ಲಿ ಸದಸ್ಯತ್ವ ಪಡೆಯಲು ಅಥವಾ ಚುನಾವಣೆಗೆ ಸ್ಪರ್ಧಿಸಲು ಐದು ವರ್ಷಗಳ ಕಾಲ ಅವರಿಗೆ ನಿರ್ಬಂಧ ಹೇರಲಾಗಿದೆ.




