32.9 C
Udupi
Saturday, April 25, 2026
spot_img
spot_img
HomeBlogಭಾನು ಮುಸ್ತಾಖ್ ರವರಿಂದ ನಾಡಹಬ್ಬ ಉದ್ಘಾಟನೆ, ವಿರೋಧಿಸುತ್ತಿರುವ ಬಿಜೆಪಿ ನಡೆ

ಭಾನು ಮುಸ್ತಾಖ್ ರವರಿಂದ ನಾಡಹಬ್ಬ ಉದ್ಘಾಟನೆ, ವಿರೋಧಿಸುತ್ತಿರುವ ಬಿಜೆಪಿ ನಡೆ

“ವಸುದೈವ ಕುಟುಂಬ” ಚಿಂತನೆಯ ಮಹಾ ಉಲ್ಲಂಘನೆ : ಬಿಪಿನ್ ಚಂದ್ರ ಪಾಲ್ ನಕ್ರೆ

ಬಹು ಪ್ರತಿಷ್ಟಿತ ಅಂತರ್ರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಸ್ತಾಖ್ ರ‌ವರು ನಾಡಹಬ್ಬ ದಸರಾವನ್ನು ಉದ್ಘಾಟಿಸುತ್ತಿರುವುದನ್ನು ವಿರೋಧಿಸುತ್ತಿರುವ ಬಿಜೆಪಿ ಸಂಘ ಪರಿವಾರದ ನಡೆ ಹಿಂದೂ ಧರ್ಮ ಪ್ರತಿಪಾದಿಸಿಕೊಂಡು ಬಂದ “ವಸುದೈವ ಕುಟುಂಬ” ಚಿಂತನೆಯ ಮಹಾ ಉಲ್ಲಂಘನೆ ಆಗಿದೆ. ನಾಡ ಹಬ್ಬ ದಸರಾಕ್ಕೆ ಮತಧರ್ಮದ ಬಂಧನ ಇಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಹೈದರಾಲಿ ಟಿಪ್ಪ ಸುಲ್ತಾನ್ ನಂತವರ ಕಾಲದಿಂದ ನಡೆದು ಬಂದ, ಮಿರ್ಜಾ ಇಸ್ಮಾಯಿಲ್ ನಂತವರು ಅಂಬಾರಿ ಏರಿದ, ಕವಿ ನಿಸ್ಸಾರ್ ಅಹಮ್ಮದ್ ನಂತವರು ಉದ್ಘಾಟಿಸಿದ ಅಭೂತಪೂರ್ವ ಪರಂಪರೆಯ ಇತಿಹಾಸವನ್ನು ಹೊಂದಿರುವ ನಾಡಹಬ್ಬ ದಸರಾ ಉದ್ಘಾಟನೆಯನ್ನು ಹಿಂದೂ ಧಾರ್ಮಿಕ ಭಾವನೆಯ ನೆಪವೊಡ್ಡಿ ಕೋಟ್೯ ಕಟಕಟೆಯವರೆಗೆ ಎಳೆದು ತಂದ ಮಾಜಿ ಸಂಸದ ಪ್ರತಾಪ ಸಿಂಹ ಆದಿಯಾಗಿ ಕೆಲವೊಂದು ಬಿಜೆಪಿಯ ಅವಕಾಶ ವಂಚಿತ ಅಸಂತೃಪ್ತ ನಾಯಕರ ಕ್ರಮ ಖಂಡನೀಯ. ಇದರಲ್ಲಿ ರಾಜಕೀಯದ ಸ್ವಾರ್ಥಸಾಧನೆ ಅಡಗಿದೆ. ಬಿಜೆಪಿಯಂತಹ ರಾಷ್ಟ್ರೀಯ ಪಕ್ಷವೊಂದಕ್ಕೆ ಇದು ಭೂಷಣವೂ ಅಲ್ಲ ಎಂದು ಅವರು ಹೇಳಿದ್ದಾರೆ.
ಅಷ್ಟಕ್ಕೂ ಉದ್ಘಾಟಕರು ನಾಡಹಬ್ಬ ದಸರಾ ಕಾರ್ಯಕ್ರಮದ ಭೌತಿಕ ಉದ್ಘಾಟನೆಯನ್ನು ಮಾಡುತ್ತಾರೆಯೇ ಹೊರತು ಆ ಹೊತ್ತು ಸನ್ನಿದಿಯಲ್ಲಿ ನಡೆಯ ಬಹುದಾದ ಎಲ್ಲ ಧಾರ್ಮಿಕ ಆಗಮೋಕ್ತ ವೈಧಿಕ ವಿಧಿ ವಿಧಾನಗಳನ್ನು ಅಲ್ಲಿನ ನಿಯೋಜಿತ ಪುರೋಹಿತ ವರ್ಗವೇ ನಡೆಸಿಕೊಡುತ್ತದೆ. ಆದಾಗ್ಯೂ ಧರ್ಮದ ಹೆಸರಲ್ಲಿ, ಹೆಣ್ಣಿನ ಹೆಸರಲ್ಲಿ, ಕುಂಕುಮ ಧಾರಣೆಯ ಹೆಸರಲ್ಲಿ, ಕನ್ನಡ ನುಡಿಯ ಗೌರವದ ಹೆಸರಲ್ಲಿ ಇದನ್ನು ವಿರೋಧಿಸುವ ಮಂದಿ ನಾಡ ದ್ರೋಹಿಗಳೆಂದರೆ ಅತಿಶಯೋಕ್ತಿಯಾಗದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page