ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯಾ ಅಧ್ಯಕ್ಷತೆಯಲ್ಲಿ,ಸಮಾಲೋಚನಾ ಕಾರ್ಯಗಾರ

ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ,ಜುಲೈ 3 ರಂದು ನಡೆದ ಸಮಾಲೋಚನಾ ಕಾರ್ಯಾ ಗಾರದಲ್ಲಿ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯಾ ಅಧ್ಯಕ್ಷತೆ ಹಾಗೂ ಮಾರ್ಗದರ್ಶನ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ ಡಾ. ಮೋಹನ್ ಆಳ್ವ ಅವರ ಸಮ್ಮುಖದಲ್ಲಿ ನೂತನವಾಗಿ ಉಡುಪಿ ಜಿಲ್ಲೆಗೆ. ಬಡಗು ಬೆಟ್ಟು ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರು ಹಾಗೂ ಮೇಲ್ವಿಚಾರಕರಾದ ಜಯಕರ್ ಶೆಟ್ಟಿ ರವರನ್ನು ಉಡುಪಿ ಜಿಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಮಾನ್ಯ ರಾಜ್ಯ ಮುಖ್ಯ ಆಯುಕ್ತರು ಶಾಲು, ಹಾರ ಹಾಕಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ ನೇಮಕ ಮಾಡಿದರು.