ನಾಳೆ ಆ. 4 ಉಡುಪಿ ಜಿಲ್ಲೆಯ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಕರಾವಳಿ ಭಾಗದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು ಉಡುಪಿ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಳಿದ ಎಲ್ಲಾ ಪದವಿಪೂರ್ವ, ಐಟಿಐ, ಡಿಪ್ಲೋಮಾ , ಪದವಿ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.























































