
ಜಿಲ್ಲಾಡಳಿತ ಉಡುಪಿ , ವಿಕಲಚೇತನರ ಹಾಗು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಡೆದ ಉಡುಪಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪಿ ಆರ್ ಏನ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಕುಮಾರಿ ಅನ್ನಪೂರ್ಣ ದ್ವಿತೀಯ ಬಹುಮಾನ ಗಳಿಸಿದ್ದಾರೆ . ಸಾಧಕ ವಿದ್ಯಾರ್ಥಿನಿಯನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಪ್ರಾಂಶುಪಾಲರು ಅಭಿನಂದಿಸಿದ್ದಾರೆ .








































