
ಬೆಂಗಳೂರು: ಕಾನೂನು ಸಚಿವ ಎಚ್ ಕೆ ಪಾಟೀಲ್ ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ ಆಗಿದೆ ಎಂದು ಹೇಳಿದ್ದಾರೆ.
ಭೂಮಿಯ ಒಳ ಯಾವುದೇ ಮೌಲ್ಯಯುತವಾದ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ್ದು ಆಗಿರುತ್ತದೆ. ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯನ್ನು ಜಿಲ್ಲಾ ಆಡಳಿತ ಖಜಾನೆಯಲ್ಲಿ ಭದ್ರವಾಗಿ ಇರಿಸಿದೆ. ಅದು ಆ ಕುಟುಂಬಕ್ಕೆ ಸೇರಿದ್ದಾ? ಆ ಜಾಗದ ಮೂಲ ಮಾಲೀಕರಿಗೆ ಸೇರಿದ್ದಾ? ಅಥವಾ ರಾಷ್ಟ್ರಕೂಟರ ಕಾಲದ್ದಾ? ಚಾಲುಕ್ಯರ ಕಾಲದ್ದಾ? ಎಲ್ಲವೂ ಪರಿಶೀಲನೆ ಮಾಡಲಾಗುತ್ತದೆ ಎಂದು ವಿವರಿಸಿದರು.



















