🔴 ಆದೇಶ ಹೊರಡಿಸಿದ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್

ಮಂಗಳೂರು: ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದಂತೆ ತಡೆಯಲು ಹಾಗೂ ಪ್ರಸಕ್ತ ವಿದ್ಯಾಮಾನಗಳನ್ನು ಪರಿಗಣಿಸಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 10ರ ಸಂಜೆ 4 ರಿಂದ ಮೇ 14ರ ಸಂಜೆ 4ರ ವರೆಗೆ ಡ್ರೋನ್ ಹಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ಠಾಣಾಧಿಕಾರಿಯವರು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಡ್ರೋನ್ ಹಾರಾಟವಾಗದಂತೆ ಸೂಕ್ತ ಕ್ರಮ ತೆಗೆದುಕೊಂಡು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.




















