
ಮಂಗಳೂರು: ಏಪ್ರಿಲ್ 22ರಂದು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ 825 ಗ್ರಾಂ ತೂಕದ ಚಿನ್ನವನ್ನು ಬಚ್ಚಿಟ್ಟುಕೊಂಡ ದಕ್ಷಿಣ ಕನ್ನಡದ ಪ್ರಯಾಣಿಕರೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಆಗಮಿಸಿದ ಪ್ರಯಾಣಿಕನನ್ನು ಸ್ಪಾಟ್ ಪ್ರೊಫೈಲಿಂಗ್ ಮತ್ತು ಅನುಮಾನಾಸ್ಪದ ಚಲನವಲನದ ಆಧಾರದ ಮೇಲೆ ಪ್ರಶ್ನಿಸಿದಾಗ 54.3 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.