
ಮಂಗಳೂರು: ಗುರುವಾರ ಮುಂಜಾನೆ ಮಂಗಳೂರು ನಗರದಲ್ಲಿರುವ ಜೈಲಿಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, ಸೇರಿದಂತೆ ಸುಮಾರು 150 ಸಿಬಂದಿಗಳ ಜೊತೆ ಮಾಡಿದ ದಾಳಿಯಲ್ಲಿ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಖೈದಿಗಳಿಂದ 25 ಮೊಬೈಲ್ ಫೋನ್ಗಳು, 1 ಬ್ಲೂಟೂತ್ ಸಾಧನ, 5 ಇಯರ್ಫೋನ್ಗಳು, 1 ಪೆನ್ ಡ್ರೈವ್, 5 ಚಾರ್ಜರ್ಗಳು, 1 ಜೊತೆ ಕತ್ತರಿ, 3 ಕೇಬಲ್ಗಳು ಸೇರಿದಂತೆ ಗಾಂಜಾ ಅಮಲು ಪದಾರ್ಥಗಳು ಪತ್ತೆಯಾಗಿವೆ.ಜೈಲಿನೊಳಗೆ ಇಷ್ಟೊಂದು ವಸ್ತುಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.











