
ಬೆಂಗಳೂರು: ಮಂಗಳೂರು ಹೊರವಲಯದ ಚೇಳಾರು ಎಂಬಲ್ಲಿ ಸಿನಿಮಾ ಚಿತ್ರೀಕರಣದ ಸೆಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಸ್ವರಾಜ್ ಶೆಟ್ಟಿಯವರು ಚಿತ್ರಕಥೆ ಹಾಗೂ ನಿರ್ದೇಶನ ಮಾಡುತ್ತಿರುವ ʼನೆತ್ತರಕೆರೆʼ ಹೆಸರಿನ ತುಳು ಹಾಗೂ ಕನ್ನಡ ಸಿನಿಮಾದ ಚಿತ್ರೀಕರಣದ ವೇಳೆ ಚಿತ್ರೀಕರಣಕ್ಕಾಗಿ ಹಾಕಿದ್ದ ಬಾರ್ ಸೆಟ್‌ನಲ್ಲಿ ಶೂಟಿಂಗ್ ನಡೆಯುತ್ತಿರುವಾಗಲೇ ಬೆಂಕಿ ಕಾಣಿಸಿಕೊಂಡಿದೆ.
ಬಾರ್ ಅಡುಗೆ ಕೋಣೆಯಲ್ಲಿ ಅಡುಗೆ ಮಾಡುವ ದೃಶ್ಯ ಚಿತ್ರೀಕರಣವಾಗುತ್ತಿದ್ದ ವೇಳೆ ಬಾಣಲೆಯಲ್ಲಿದ್ದ ಎಣ್ಣೆಗೆ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು ಪಕ್ಕದಲ್ಲಿದ್ದ ಬಟ್ಟೆಗಳಿಗೆ ಬೆಂಕಿ ತಗುಲಿ ಇಡೀ ಸೆಟ್ ಗೆ ಬೆಂಕಿ ಆವರಿಸಿ ಬಾರ್ ಸೆಟ್ ಒಂದು ಭಾಗ ಪೂರ್ಣ ಬೆಂಕಿಗಾಹುತಿಯಾಗಿದ್ದರಿಂದ ಸುಮಾರು 2 ಲಕ್ಷ ರೂ. ನಷ್ಟವಾಗಿದೆ ಎಂದು ಚಿತ್ರ ತಂಡ ತಿಳಿಸಿದೆ





















