
ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ಬಾಸ್ಕೆಟ್ ಬಾಲ್ ನಲ್ಲಿ ರಾಜ್ಯಮಟ್ಟಕ್ಕೆ ದಿನಾಂಕ 20.09.2024ರಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವತಿಯಿಂದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜು, ಗಣಿತ ನಗರದಲ್ಲಿ ನಡೆದ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರೀರಕ್ಷಾ ಹೆಗ್ಡೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಹರಿಖಂಡಿಗೆಯ ಅನಿಲ್ ಕುಮಾರ್ ಹೆಗ್ಡೆ ಹಾಗೂ ಉಷಾ ಹೆಗ್ಡೆ ಯವರ ಸುಪುತ್ರಿ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.













