
ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ವಾಲಿಬಾಲ್ ನಲ್ಲಿ ರಾಜ್ಯಮಟ್ಟಕ್ಕೆ
ದಿನಾಂಕ 27.09.2024ರಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವತಿಯಿಂದ ಮಿಲಾಗ್ರಿಸ್ ಪದವಿಪೂರ್ವ ಕಾಲೇಜು, ಕಲ್ಯಾಣ್ ಪುರದಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಆರ್ ಹೆಗ್ಡೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಕುಕ್ಕೆಹಳ್ಳಿ ರಾಜೇಶ್ ಹೆಗ್ಡೆ ಹಾಗೂ ಸಂಧ್ಯಾ ಕುಮಾರಿ ಶೆಟ್ಟಿಯವರ ಸುಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.













