
ನವದೆಹಲಿ: ದೇಶದ ಮನೆ ಮನೆಯಲ್ಲಿ ದೀಪಾವಳಿ ಸಂಭ್ರಮಾಚರಣೆ ನಡೆಯುತ್ತಿದ್ದು ಆದರೆ ಇತ್ತ ಸದ್ದಿಲ್ಲದೆ ಸತತ 3ನೇ ತಿಂಗಳು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಇದೀಗ 62 ರೂಪಾಯಿ ಏರಿಕೆ ಮಾಡಲಾಗಿದೆ.
ವಾಣಿಜ್ಯ ಉದ್ದೇಶಕ್ಕೆ ಬಳಸುವ ಸಿಲಿಂಡರ್ ಬೆಲೆ ಏರಿಕೆಯಾಗಿರುವುದರಿಂದ ಶೀಘ್ರದಲ್ಲೇ ಹೊಟೆಲ್ ತಿನಿಸು ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. 14 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಹಾಗೂ ಗೃಹಬಳಕೆಯ ಸಿಲಿಂಡರ್ ನಲ್ಲಿ ಯಾವುದೇ ಬೆಲೆ ಏರಿಕೆ ಮಾಡಿಲ್ಲ.
19 ಕೆಜಿ ಎಲ್‌ಪಿಜಿ ಸಿಲಿಂಡರ್ ಪರಿಷ್ಕೃತ ಬೆಲೆ


ಬೆಂಗಳೂರು: 1880 ರೂಪಾಯಿ
ದೆಹಲಿ: 1802 ರೂಪಾಯಿ
ಮುಂಬೈ: 1754.50 ರೂಪಾಯ
ಕೋಲ್ಕತಾ:1911.50 ರೂಪಾಯಿ
ಚೆನ್ನೈ: 1,964.50 ರೂಪಾಯಿ
ಕೇವಲ 10 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮಾತ್ರವಲ್ಲ, ವಿಮಾನಗಳ ಇಂಧನದ ಬೆಲೆಯೂ ಏರಿಕೆ ಮಾಡಲಾಗಿದೆ. ಎವಿಯೇಶನ್ ಟರ್ಬೈನ್ ಫ್ಯೂಯೆಲ್(ATF) ಏರ್‌ಕ್ರಾಫ್ಟ್ ಗ್ಯಾಸ್ ಟರ್ಬೈನ್ ಎಂಜಿನ್‌ಗಳಲ್ಲಿ ಬಳಸುವ ಇಂಧನ ದರ ಇದೀಗ ದುಬಾರಿಯಾಗಿದೆ. ಇನ್ನು ದೆಹಲಿಯಲ್ಲಿ ಪ್ರತಿ ಕಿಲೋಲೀಟರ್‌ಗೆ 90,538.72 ರೂಪಾಯಿ, ಕೋಲ್ಕತಾದಲ್ಲಿ ಪ್ರತಿ ಕಿಲೋಲೀಟರ್‌ಗೆ 93,392.79 ರೂಪಾಯಿ, ಮುಂಬೈನಲ್ಲಿ 84,642.91 ರೂಪಾಯಿ ಹಾಗೂ ಚೆನ್ನೈನಲ್ಲಿ 93,957.10 ರೂಪಾಯಿ ಆಗಿದೆ.







