
ಆಗ್ರಾ : ಗುರುವಾರ ಭೋಪಾಲ್‌ನಿಂದ ಆಗ್ರಾಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿ ನಲ್ಲಿ ಕೊಡಲಾದ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು ಇದರ ಬೆನ್ನಲ್ಲೇ ಇದರ ನಿರ್ವಹಣೆ ಹೊತ್ತ ಐಆರ್‌ಸಿಟಿಸಿ, ಪ್ರಯಾಣಿಕ ದಂಪತಿಯಲ್ಲಿ ಕ್ಷಮೆ ಕೇಳಿದ ಘಟನೆ ನಡೆದಿದೆ.
ವಿದಿತ್ ವರ್ಷಣೆ ಎಂಬಾತ ತನ್ನ ತಮ್ಮ ಎಕ್ಸ್ ಖಾತೆಯಲ್ಲಿ ತಮ್ಮ ಸಂಬಂಧಿಕರಿಗೆ ವಂದೇ ಭಾರತ್ ರೈಲಿನಲ್ಲಿ ಕೊಡಲಾದ ಊಟದಲ್ಲಿ ಜಿರಳೆ ಕಾಣಿಸಿಕೊಂಡ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಐಆರ್‌ಸಿಟಿಸಿ ಕ್ಷಮೆ ಯಾಚಿಸಿದೆ. ಜೊತೆಗೆ ಸಂಬಂಧಪಟ್ಟವರ ಮೇಲೆ ಸೂಕ್ತ ಪ್ರಮ ಕೈಗೊಳ್ಳಲಾಗಿದೆ ಎಂದು ಭರವಸೆ ವ್ಯಕ್ತಪಡಿಸಿದೆ.