28.6 C
Udupi
Sunday, April 26, 2026
spot_img
spot_img
HomeBlogಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಭಾವನೆಗೆ ಧಕ್ಕೆಯಾಗಲ್ಲ: ಆದೇಶ ಹೊರಡಿಸಿದ ಕರ್ನಾಟಕ ಹೈಕೋರ್ಟ್

ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಭಾವನೆಗೆ ಧಕ್ಕೆಯಾಗಲ್ಲ: ಆದೇಶ ಹೊರಡಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪದ ಮೇಲೆ ದೂರು ದಾಖಲಾಗಿದ್ದು ಇದರ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು ಮೊಕದ್ದಮೆಯ ವಿಚಾರಣೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿ ‘ಜೈ ಶ್ರೀರಾಮ್’ ಎಂದು ಕೂಗುವುದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ, ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.

2023 ರ ಸೆಪ್ಟೆಂಬರ್ 24 ರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಐತ್ತೂರು ಗ್ರಾಮದ ಕಡಬ-ಮರ್ದಾಳ ರಸ್ತೆಯಲ್ಲಿರುವ ಮಸೀದಿ ಆವರಣಕ್ಕೆ ನುಗ್ಗಿದ್ದ ಕೆಲವು ಅಪರಿಚಿತ ವ್ಯಕ್ತಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆಗಳನ್ನು ಕೂಗಿದ್ದರು. ಬ್ಯಾರಿ ಸಮುದಾಯಕ್ಕೆ ಸೇರಿದವರನ್ನು ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಮರುದಿನ, ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ ನಂತರ ಮಸೀದಿಯವರು ಪೊಲೀಸರಿಗೆ ದೂರು ನೀಡಿದ್ದರು. ಕೆಲವು ಯುವಕರು ಬೈಕ್‌ಗಳಲ್ಲಿ ಮಸೀದಿ ಸುತ್ತಿದ್ದಲ್ಲದೆ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಸಿಸಿಟಿವಿ ದೃಶ್ಯವನ್ನೂ ಅವರು ಒದಗಿಸಿದ್ದರು.

ಪ್ರಕರಣದ ಆರೋಪಿಗಳು ಹೈಕೋರ್ಟ್‌ಗೆ ಮೊರೆ ಹೋಗಿದ್ದು ತಮ್ಮ ವಿರುದ್ಧದ ಆರೋಪಗಳಿಗೆ ಅಗತ್ಯವಾದ ಯಾವುದೇ ಅಂಶಗಳು ಪ್ರಕರಣದಲ್ಲಿ ಇಲ್ಲ ಎಂದು ಅವರು ಪ್ರತಿಪಾದಿಸಿದ್ದರು.

ಐಪಿಸಿ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಆದರೆ ಮಸೀದಿಯು ಸಾರ್ವಜನಿಕ ಸ್ಥಳವಾಗಿರುವುದರಿಂದ ಅದರ ಆವರಣಕ್ಕೆ ಪ್ರವೇಶವನ್ನು ಕ್ರಿಮಿನಲ್ ಅತಿಕ್ರಮಣ ಎಂದು ಅರ್ಥೈಸಲಾಗುವುದಿಲ್ಲ ಎಂದು ಆರೋಪಿಗಳ ಪರ ವಕೀಲರು ವಾದಿಸಿದ್ದರೆ ಮತ್ತೊಂದೆಡೆ, ಮಸೀದಿಯ ಆವರಣದಲ್ಲಿ ‘ಜೈ ಶ್ರೀರಾಮ್’ ಎಂದು ಕೂಗುವಂತಿಲ್ಲ ಮತ್ತು ಬೆದರಿಕೆ ಹಾಕುವಂತಿಲ್ಲ ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಯಾರಾದರೂ ‘ಜೈ ಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುವುದಿಲ್ಲ. ಈ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ದೂರುದಾರರೇ ಹೇಳಿರುವಾಗ, ಘೋಷಣೆಯು ಘರ್ಷಣೆಗೆ ಕಾರಣವಾಗಬಹುದು ಎನ್ನಲಾಗದು ಎಂದು ಹೇಳಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page