27.9 C
Udupi
Wednesday, February 18, 2026
spot_img
spot_img
HomeBlogಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಶೋಕಾಚರಣೆ ಸರ್ಕಾರಿ ಕಾರ್ಯಕ್ರಮಕ್ಕೆ ಮಾತ್ರ, ಹೊಸ ವರ್ಷದ ಸ್ವಾಗತಕ್ಕಲ್ಲ:...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಶೋಕಾಚರಣೆ ಸರ್ಕಾರಿ ಕಾರ್ಯಕ್ರಮಕ್ಕೆ ಮಾತ್ರ, ಹೊಸ ವರ್ಷದ ಸ್ವಾಗತಕ್ಕಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಸುದ್ದಿಗಾರರೊಂದಿಗೆ ಮಾತನಾಡಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಘೋಷಿಸಿರುವ ಶೋಕಾಚರಣೆ ಹಿನ್ನೆಲೆಯಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ, ಹೊಸ ವರ್ಷಾಚರಣೆಗೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸರ್ಕಾರ ಏಳು ದಿನ ಶೋಕಾಚಾರಣೆ ಘೋಷಣೆ ಮಾಡಿದ್ದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ತಡೆ ಹಿಡಿಯಲಾಗಿದೆ ಹೊರತು ಖಾಸಗಿ ಕಾರ್ಯ ಕ್ರಮಗಳಲ್ಲಿ ಹಸ್ತಕ್ಷೇಪ ಮಾಡಲ್ಲ, ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಬಹುದು. ಹೊಸ ವರ್ಷಾಚರಣೆ ಮಾರ್ಗಸೂಚಿ, ಸಮಯಾವಕಾಶದ ಬಗ್ಗೆ ಪೊಲೀಸರು ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.

ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಯಾರೊಬ್ಬರೂ ಕೆಟ್ಟದಾಗಿ ವರ್ತಿಸುವಂತಿಲ್ಲ. ಅನುಚಿತ ವರ್ತನೆ, ಕಾನೂನು ಉಲ್ಲಂಘನೆ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದರು.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page